Saturday, April 4, 2026
Google search engine

Homeರಾಜ್ಯಸುದ್ದಿಜಾಲಶಿಡ್ಲಘಟ್ಟದಲ್ಲಿ ರೌಡಿ ಶೀಟರ್‌ಗಳ ಪರೇಡ್ : ಕಡ್ಡಾಯ ಹಾಜರಾತಿ ಸೂಚನೆ

ಶಿಡ್ಲಘಟ್ಟದಲ್ಲಿ ರೌಡಿ ಶೀಟರ್‌ಗಳ ಪರೇಡ್ : ಕಡ್ಡಾಯ ಹಾಜರಾತಿ ಸೂಚನೆ

ಶಿಡ್ಲಘಟ್ಟ : ರೌಡಿ ಶೀಟರ್‌ಗಳ ಮೇಲಿನ ಪೊಲೀಸ್ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಪರೇಡ್‌ಗೆ ಗೈರುಹಾಜರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಮುರಳಿಧರ್ ಎಚ್ಚರಿಕೆ ನೀಡಿದ್ದಾರೆ.

ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಅವರ ನೇತೃತ್ವದಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು. ಈ ವೇಳೆ ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್‌ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು. ಗೈರು ಹಾಜರಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇನ್ನೂ ಶಿಡ್ಲಘಟ್ಟ ನಗರ, ಗ್ರಾಮಾಂತರ ಹಾಗೂ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತ್ಯಂತ ಪ್ರಮುಖವಾಗಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಇಂತಹ ನಿಯಮಿತ ಪರೇಡ್‌ಗಳ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸು ವುದರ ಜೊತೆಗೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸರ ಉದ್ದೇಶವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ ಆನಂದ್, ಪಿಎಸ್‌ಐ ವೇಣುಗೋಪಾಲ್, ಸುನಿಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular