Sunday, June 22, 2025
Google search engine

Homeರಾಜ್ಯಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ಜನರು ನೋಡಿದ್ದಾರೆ: ಬಿ.ವೈ.ವಿಜಯೇಂದ್ರ

ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ಜನರು ನೋಡಿದ್ದಾರೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶ, ರಾಜ್ಯದ ಜನರು ನೋಡಿದ್ದಾರೆ. ಸುತ್ತಿ ಬಳಸಿ ಮಾತನಾಡುವುದಿಲ್ಲ; ನೇರವಾಗಿ ಹೇಳುತ್ತೇನೆ. ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು.

ಇಂದು ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಎಂ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡಿನ ಬೆಂಬಲ ಇದೆ ಎಂಬಂತೆ ವರ್ತಿಸುತ್ತಿದ್ದಾರೆ. ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ದೋಚಿದ ಹಣವು ಕಾಂಗ್ರೆಸ್ ಹೈಕಮಾಂಡಿಗೆ ತಲುಪಿದೆ ಎಂಬ ವಿಷಯವೂ ಕೇಳಿಬರುತ್ತಿದೆ. ಆದ್ದರಿಂದ ಹೈಕಮಾಂಡ್ ಸಿದ್ದರಾಮಯ್ಯರ ಪರ ನಿಂತಿದೆ ಎಂಬುದು ದೊಡ್ಡ ವಿಚಾರವಲ್ಲ. ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದ ವಿಚಾರಗಳು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಕುರಿತು ಸಿದ್ದರಾಮಯ್ಯನವರು ಇನ್ನೊಂದು ಬಾರಿ ಓದಿದರೆ ತಕ್ಷಣ ರಾಜೀನಾಮೆ ಕೊಡಲು ಅವರಿಗೂ ಅನುಕೂಲವಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಮುಖ್ಯಮಂತ್ರಿಯವರು ರಾಜೀನಾಮೆ ಕೊಡುತ್ತಾರೆ. ಕೊಡಲೇಬೇಕಾಗುತ್ತದೆ. ಬಹಳ ದಿನ ಓಡಿಹೋಗಲು ಸಾಧ್ಯವಿಲ್ಲ. ಗೌರವಯುತವಾಗಿ ರಾಜೀನಾಮೆ ಕೊಟ್ಟರೆ ರಾಜ್ಯಕ್ಕೂ ಒಳ್ಳೆಯದು; ಅವರ ಗೌರವವೂ ಅಲ್ಪಸ್ವಲ್ಪ ಉಳಿಯುತ್ತದೆ ಎಂದು ತಿಳಿಸಿದರು. ಮುಖ್ಯಮಂತ್ರಿಯವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

ಮುಡಾ ಹಗರಣ ನಡೆದಿಲ್ಲ; ಬಿಜೆಪಿಯವರಿಗೆ ತಲೆ ಕೆಟ್ಟಿದೆ ಎಂಬಂತೆ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು. ೬೨ ಕೋಟಿ ಪರಿಹಾರ ಅಪೇಕ್ಷಿಸದೆ ೧೪ ನಿವೇಶನ ಹಿಂತಿರುಗಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ. ಹೈಕೋರ್ಟಿನ ತೀರ್ಪು, ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಬಳಿಕವೂ ಮುಖ್ಯಮಂತ್ರಿಗಳು ತಮ್ಮ ಭಂಡತನ ಮುಂದುವರೆಸಿದ್ದಾರೆ ಎಂದು ಆಕ್ಷೇಪಿಸಿದರು.

RELATED ARTICLES
- Advertisment -
Google search engine

Most Popular