ಬೆಳಗಾವಿ: ಮೋದಿ ಇದ್ದರೆ ಮಾತ್ರ ದೇಶ ಸುಭದ್ರವಾಗಿರಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಜೊತೆ ಹೋದರೆ ದೇಶ, ಧರ್ಮ ಸುಭದ್ರವಾಗಿರುತ್ತದೆ. ನಾವೆಲ್ಲಾ ಅಭಿವೃದ್ಧಿ ಪಥದಲ್ಲಿ ಸಾಗುತ್ತೇವೆ. ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಕಾಂಗ್ರೆಸ್ ಸೋತಿದೆ ಎಂದು ದೆಹಲಿ ಕೈ ನಾಯಕರೇ ಹೇಳುತ್ತಿದ್ದಾರೆ. ಇಲ್ಲಿ ಮಾತ್ರ ಸಿದ್ದರಾಮಯ್ಯನವರು ಟಿಪ್ಪು ಜಯಂತಿ ಮಾಡಿ ವಿಜೃಂಭಿಸುತ್ತಿದ್ದಾರೆ ಎಂದರು.
ಮೂರು ರಾಜ್ಯದಲ್ಲಿ ಸೋತಿರುವ ಬಗ್ಗೆ ಕಾಂಗ್ರೆಸ್‌ನವರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಗೆದ್ದಿದ್ದೇವೆ ಎಂದು ಮಾತ್ರ ಹೇಳುತ್ತಿದ್ದಾರೆ. ತೆಲಂಗಾಣದಲ್ಲಿ ಬಿಆರ್‌ಎಸ್ ಪಾರ್ಟಿ ವಿರುದ್ಧ ಇದ್ದು ರೆಸಾರ್ಟ್?ನಲ್ಲಿ ರಾಜಕಾರಣ ಮಾಡ್ತಿದ್ದರು. ಹೀಗಾಗಿ, ಕಾಂಗ್ರೆಸ್ ಅಲ್ಲಿ ಗೆದ್ದಿದೆ ಎಂದರು.