ವರದಿ: ರವಿಚಂದ್ರ ಬೂದಿತಿಟ್ಟು
ಪಿರಿಯಾಪಟ್ಟಣ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಚರಂಡಿ, ಸಿ ಸಿ ರಸ್ತೆ, ಲೈಬ್ರರಿ, ಶಾಲೆ ಕೊಠಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪಶು ಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಗುದ್ದಲಿ ಪೂಜೆ ನಡೆಸಿದರು.
ನಂತರ ಮಾತನಾಡಿದ ಅವರು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮುದಾಯ ಭವನ, ರಸ್ತೆ, ಸಾರಿಗೆ, ಚರಂಡಿ, ಸಿ.ಸಿ.ರಸ್ತೆ ಸೇರಿದಂತೆ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಶಾಲೆಯ ಕಟ್ಟಡದ ಕೊರತೆ ನೀಗಿಸಲಾಗಿದೆ. ಆ ಮೂಲಕ ಸಾರ್ವಜನಿಕರ ಕನಸು ನನಸಾದಂತಾಗಿದೆ ಹಾಗೂ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಆ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಬಲೀಕರಣವಾಗಬೇಕಾಗಿದೆ. ಸಮುದಾಯದ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಭವನ ನಿರ್ಮಾಣ ಮಾಡಲಾಗುತ್ತಿದೆ. ಏತ ನೀರಾವರಿ ಯೋಜನೆಯಡಿ ಹಾಗೂ ಸುವರ್ಣ ಗ್ರಾಮದ ಗ್ರಾಮೋದಯ ಯೋಜನೆಯಡಿ ಬಹುಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದ್ದು ಆ ಮೂಲಕ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮಂಜೂರು ಮಾಡಿಸಿ ಗ್ರಾಮೀಣ ಜನರಿಗೆ ಮೂಲ ಸೌಲಭ್ಯ ಕಲ್ಪಿಸಲಾಗುವುದು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದರೂ ಇಂಗ್ಲೀಷ್ ಭಾಷೆಯ ವ್ಯಾಮೋಹ ಹಾಗೂ ಖಾಸಗಿ ಶಾಲೆಗಳ ಹೊಡೆತದಿಂದ ಸರ್ಕಾರಿ ಶಾಲೆಗಳ ಮಕ್ಕಳ ದಾಖಲಾತಿ ಕ್ಷೀಣಿಸುತ್ತಿದ್ದು, ಸರ್ಕಾರ ಬಡವರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿವ ನಿಟ್ಟಿನಲ್ಲಿ ಸ್ಮಾರ್ಟ್ ತರಗತಿಗಳು, ಡಿಜಿಟಲ್ ಲೈಬ್ರರಿ, ಯೋಗ, ಕರಾಟೆ ತರಬೇತಿ, ಮದ್ಯಾಹ್ನದ ಬಿಸಿಯೂಟ ಸೇರಿದಂತೆ ಇನ್ನೂ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಬೇಡಾ ಎಂದು ಬಡ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿದೆ ಆದರೆ, ಪೋಷಕರು ಮಾತ್ರಾ ಇದ್ಯಾವುದಕ್ಕೂ ಲಕ್ಷ್ಯ ಕೊಡದೇ ಕೇವಲ ಇಂಗ್ಲೀಷ್ ಭಾಷೆಯಿಂದ ,ಮಾತ್ರ ಎಲ್ಲವೂ ಸಾಧ್ಯ ಎಂಬ ಭ್ರಮೆಯಲ್ಲಿ ಖಾಸಗಿ ಶಾಲೆಗಳ ಮೊರೆ ಹೋಗುತ್ತಿರುವುದು ಬೇಸರ ಮೂಡಿಸಿದೆ ಎಂದ ಅವರು ಗುಣಮಟ್ಟದ ಶಿಕ್ಷಣ ಇರುವುದು ಸರ್ಕಾರಿ ಶಾಲೆಗಳಲ್ಲಿ ಹಾಗಾಗಿ ಪೋಷಕರಿಗೆ ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸಿಲು ಶಿಕ್ಷಕರು ಆಸಕ್ತಿ ವಹಸಿಬೇಕು ಎಂದರು. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮುದಾಯ ಭವನ, ರಸ್ತೆ, ಸಾರಿಗೆ, ಚರಂಡಿ, ಸಿ.ಸಿ.ರಸ್ತೆ ಸೇರಿದಂತೆ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಸರ್ಗ ಪ್ರಿಯಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೆಶಕ ಈ.ಪಿ.ಲೋಕೇಶ್, ಪುರಸಭಾ ಮಾಜಿ ಅಧ್ಯಕ್ಷ ವಿಷಕಂಠಯ್ಯ, ಗ್ರಾಪಂ ಅಧ್ಯಕ್ಷೆ ಅಕ್ಕಯ್ಯಮ್ಮ, ಐಲಾಪುರ ಲೋಕೇಶ್, ರಘು, ಪಿಡಿಒ ಮಂಜುನಾಥ್, ಸುರೇಶ್, ಬೋರೇಗೌಡ, ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ವೆಂಕಟೇಶ್, ದಿನೇಶ್, ಕುಮಾರ್, ಪೀಟರ್, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ಲವಕುಮಾರ್, ಅಹಮದ್, ಜಿಲ್ಲಾಪಂಚಾಯತ್ ಇಂಜಿನಿಯರ್ ಮಲ್ಲಿಕಾರ್ಜುನ್, ವಲಯ ಅರಣ್ಯಾಧಿಕಾರಿ ಪದ್ಮಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಶಶೀಧರ್, ಸೋಮಲಿಂಗಪ್ಪ, , ರೇಷ್ಮೆ ಇಲಾಖೆ ಸಹಾಯಕ ನಿರ್ದೆಶಕ ಮಾದೇಶ್, ಕೃಷಿ ಅಧಿಕಾರಿ ಹಿತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು ಮುಖಂಡ ಬಿ.ಜೆ.ಬಸವರಾಜ್ , ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ನಿರುಪಮಾ ರಾಜೇಶ್, ಯೂಥ್ ಕಾಂಗ್ರೆಸ್ ಅಧ್ಯಕ್ಷ ರಘು ಕೆಪಿಸಿಸಿ ಹಿಂದುಳಿದ ಮಾರ್ಗ ರಾಜ್ಯ ಕಾರ್ಯದರ್ಶಿ ಯಾದವ್ ಕುಮಾರ ಮುಖಂಡರಾದ ಹರೀಶ್ ಹುಣಸವಾಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.