ರಾಮನಗರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾ. ೧೬ ರಿಂದ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರನ್ನು ಮುದ್ರಿಸುವ ಮೊದಲು ಅನುಮತಿಯನ್ನು ಕಡ್ಡಾಯವಾಗಿ ಪಡೆದು ಚುನಾವಣೆ ನೀತಿ ಸಂಹಿತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದ್ದಾರೆ.
ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ. ಮುದ್ರಕರು ಪಾಂಪ್ಲೇಂಟ್‌ಗಳು ಮತ್ತು ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಪ್ರತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು.
ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ಮುದ್ರಿಸಬಾರದು ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್, ಪ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿ?ರದಂತಹ ಪೋಸ್ಟರ್, ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.