ಬೆಂಗಳೂರು: ಪೆರುಗು ಸುಧಾ ಬುಧವಾರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಂಗಾಮಿ ಮುಖ್ಯ ನ್ಯಾಯಾಧೀಶ ವಿ. ಕಾಮೇಶ್ವರ ರಾವ್, ಇಂಧನ ಸಚಿವ ಕೆ.ಜೆ. ಜಾರ್ಜ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.