Friday, May 15, 2026
Google search engine

Homeರಾಜ್ಯಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಖಾಸಗಿ ಬಸ್‌ ಪ್ರಯಾಣ ದರವೂ ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಖಾಸಗಿ ಬಸ್‌ ಪ್ರಯಾಣ ದರವೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿನ ಜನರಿಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ಒಂದರ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ತಟ್ಟುತ್ತಲೇ ಇದ್ದು ಇದೆ. ಇಂದು ಸಹ ದಿಡೀರನೇ ತೈಲ ದರ ಏರಿಕೆಯಾಗಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ನಡುವೆ ಈ ಇಂದನ ದರ ಏರಿಕೆಯನ್ನೇ ಇ ಮುಂದಿಟ್ಟುಕೊಂಡು ಖಾಸಗಿ ಬಸ್ ಮಾಲೀಕರು ಸಹ ಪ್ರಯಾಣ ದರವನ್ನು ದಿಢೀರ್ ಆಗಿ ಹೆಚ್ಚಳ ಮಾಡಿದ್ದಾರೆ.

ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ20ರಷ್ಟು ಹೆಚ್ಚಿಸಲಾಗಿದ್ದು, ಇದರಿಂದಾಗಿ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ದರ ಏರಿಕೆ ಕುರಿತು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಅಧಿಕೃತ ಮಾಹಿತಿ ನೀಡಿದ್ದು, ಇಂಧನ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಬಸ್ ನಿರ್ವಹಣಾ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಶೇ. 20 ರಿಂದ 30 ರಷ್ಟು ಪ್ರಯಾಣ ದರವನ್ನು ಹೆಚ್ಚಳ ಮಾಡಬೇಕಾಗಿ ಬಂದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular