Monday, July 13, 2026
Google search engine

Homeದೇಶಗಡಿಪಾರು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ : ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲಿ ಹಿನ್ನಡೆ

ಗಡಿಪಾರು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ : ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲಿ ಹಿನ್ನಡೆ

ನವದೆಹಲಿ : ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಹಿನ್ನೆಲೆಯಲ್ಲಿ ತಮ್ಮನ್ನು ಗಡಿಪಾರು ಮಾಡಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯಲ್ಲಿ ಹಿಂದೂ ಪರ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

ತಮ್ಮ ಗಡಿಪಾರು ಆದೇಶ ಪ್ರಶ್ನಿಸಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು (SLP) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವಂತೆ ಅಧಿಕಾರಿಗಳು ಆದೇಶಿಸಿದ್ದರು.

ಈ ಆದೇಶವನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಸರ್ಕಾರದ ಕ್ರಮವನ್ನು ಸಮರ್ಥಿಸಿ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ತಿಮರೋಡಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇನ್ನೂ ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಗಡಿಪಾರು ಆದೇಶದಲ್ಲಿ ಕಾನೂನು ಉಲ್ಲಂಘನೆ ಕಂಡುಬಂದಿಲ್ಲ ಹಾಗೂ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಸೂಕ್ತ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

ಏನಿದು ಗಡಿಪಾರು ಕ್ರಮ?

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸಾರ್ವಜನಿಕ ಶಾಂತಿಗೆ ಧಕ್ಕೆ, ಕೋಮು ಸೌಹಾರ್ದತೆಗೆ ಹಾನಿ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದರು.

ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಿಂದ ಹೊರಗಿಡುವ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಇಲಾಖೆ ಹಾಗೂ ಜಿಲ್ಲಾಡಳಿತ ವರದಿ ನೀಡಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸದ್ಯಕ್ಕೆ ತಿಮರೋಡಿ ಅವರು ಮಾನ್ವಿ ತಾಲೂಕಿನಲ್ಲಿ ಉಳಿಯಬೇಕಾದ ಪರಿಸ್ಥಿತಿ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular