ಬೆಂಗಳೂರು : ಸಿಂಧನೂರು ತಾಲ್ಲೂಕಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲು 15 ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್‌ಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಸನಗೌಡ ಬಾದರ್ಲಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟ್ರಲ್ ಸೀಡ್ಸ್ ಫಾರಂನಲ್ಲಿರುವ 7,500 ಎಕರೆಯಷ್ಟು ಜಮೀನಿನಲ್ಲಿ 15 ಎಕರೆ ನೀಡುವಂತೆ ಪತ್ರ ಬರೆಯಲಾಗಿದ್ದು, ಜಮೀನು ದೊರೆತರೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಕಲಬುರಗಿಯಲ್ಲಿ ಪಿಎಂ ಮಿತ್ರ ಪಾರ್ಕ್ ಅನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.



