Friday, June 13, 2025
Google search engine

HomeUncategorizedರಾಷ್ಟ್ರೀಯಅಹಮದಾಬಾದ್ ವಿಮಾನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಅಹಮದಾಬಾದ್ ವಿಮಾನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರಕಟಿಸಿದ ಅವರು, ಈ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ .ಇದರಿಂದ ತೀವ್ರ ದುಃಖವಾಗಿದೆ ಎಂದು ತಿಳಿಸಿದರು. ಸಿಲುಕಿರುವವರಿಗೆ ನೆರವು ನೀಡಲು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಂದ ಅಪಘಾತದ ಕುರಿತು ವಿವರಗಳನ್ನೂ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular