ಮೈಸೂರು : ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ತಮ್ಮ ಅಧಿಕಾರಿಗಳ ಜತೆ ನಗರದ ಹೃದಯ ಭಾಗದಲ್ಲಿರುವ ಅಶೋಕಾ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಗಸ್ತು ಮಾಡಿ ಚಿನ್ನದ ಅಂಗಡಿಗಳ ಭದ್ರತೆ ಮತ್ತು ಅಲ್ಲಿನ ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆ ನಡೆಸಿದರು.
ಬಳಿಕ ಅವರು ಚಿನ್ನದ ಅಂಗಡಿಗಳ ಮಾಲೀಕರುಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಅಲ್ಲದೇ ಅವರು ವಿವಿಧ ಠಾಣಾ ವ್ಯಾಪ್ತಿಯ ಬ್ಯಾಂಕ್‌ಗಳು, ಎಟಿಎಂಗಳಲ್ಲಿ ಸಿ.ಸಿ ಕ್ಯಾಮರಾಗಳ ಕಾರ್ಯನಿರ್ವಹಣೆ ಬಗ್ಗೆ ಮತ್ತು ಬ್ಯಾಂಕ್‌ನ ಭದ್ರತೆ ಬಗ್ಗೆ ಅಲ್ಲಿನ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿ ಪರಿಶೀಲಿಸಿ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಡಿಸಿಪಿ ಮುತ್ತುರಾಜು. ಎಂ.,ಮತ್ತಿತರ ಪೊಲೀಸ್ ಅಧಿಕಾರಿಗಳು ಇದ್ದರು.



