ಮೈಸೂರು : ನಗರ ಪೊಲೀಸರು ಮಂಗಳವಾರ ಬೆಳಗ್ಗೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದ ವೇಳೆ ಜೈಲಿನಲ್ಲಿ ಚಾಕು, ಬ್ಲೇಡ್ ಮತ್ತು ಸಿಮ್ ಕಾರ್ಡ್ ಪತ್ತೆಯಾಗಿದೆ.
ಪೊಲೀಸ್ ಆಯುಕ್ತ ಬಿ. ರಮೇಶ್ ನೇತೃತ್ವದಲ್ಲಿ ಡಿಸಿಪಿಗಳಾದ ಎಂ.ಮುತ್ತುರಾಜು, ಎಸ್. ಜಾಹ್ನವಿ ಹಾಗೂ ಇನ್ನಿತರ ಪೊಲೀಸ್ ಅಧಿಕಾರಿಗಳು ಶ್ವಾನದಳ ಮತ್ತು ಎ.ಎಸ್.ಸಿ ಟೀಮ್ ಜತೆ ಜೈಲಿನಲ್ಲಿ ತಪಾಸಣೆ ನಡೆಸಿದರು. ತಪಾಸಣಾ ಕಾರ್ಯಾಚರಣೆಯ ಸಮಯದಲ್ಲಿ ಕಾರಾಗೃಹದ ಆವರಣದಲ್ಲಿ ಅನಧಿಕೃತವಾಗಿ ಇದ್ದಂತಹ ಒಂದು ಸಿಮ್ ಕಾರ್ಡ್, ನಗದು, ಬ್ಲೇಡ್ ಹಾಗೂ ಚಾಕುವಿನಂತ ಹರಿತವಾದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.