ಬೆಂಗಳೂರು: ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಇದು ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಡಿಜಿ ಮತ್ತು ಐಜಿಪಿ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಾರ್ಷಿಕ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ ಎಂದರು.
ರಾಜ್ಯದಲ್ಲಿ ಕೆಲವು ಪೊಲೀಸ್ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಪೊಲೀಸ್ ಅಧಿಕಾರಿಗಳಿಗೆ ಗೊತ್ತಾಗದೇ ಕ್ರೈಂ ನಡೆಯಲು ಸಾಧ್ಯವಿಲ್ಲ, ಪೊಲೀಸರು ಬಲಾಢ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು. ರಾಯಚೂರಿನ ಕವಿತಾಳ ಠಾಣೆ ದೇಶದಲ್ಲೇ 3ನೇ ಸ್ಥಾನ ಪಡೆದುಕೊಂಡಿದೆ ಎಂದು ತಿಳಿಸಿದರು.



