ಪ್ರತಿಯೊಬ್ಬರೂ ಕಡ್ಡಾಯವಾಗಿ ಜಿಲ್ಲೆಯಲ್ಲಿನ ಒಂದು ವರ್ಷದಿಂದ 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೊಲೀಯೋ ಲಸಿಕೆ ಕೊಡಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಢಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅವರು ಇಂದು ಜಿಲ್ಲಾಡಳಿತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಚಾಲನೆ ನೀಡಿ ಮತನಾಡಿದರು.
ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಶಾಶ್ವತವಾಗಿ ಅಂಗ ವೈಫಲ್ಯತೆಯಿಂದ ಮುಕ್ತ ಮಾಡಬಹುದು. ಮುಂದೆ ಯಾವುದೇ ರೀತಿಯ ಅಂಗ ವೈಫಲ್ಯತೆ ಮಕ್ಕಳಿಗೆ ಕಾಡದಿರಲು ಸರ್ಕಾರದೊಂದಿಗೆ ಕೈ ಜೋಡಿಸಿ ಪಲ್ಸ್ ಪೊಲೀಯೋ ಅಭಿಯಾನ ಯಶಸ್ವಿಗೊಳಿಸಬೇಕು. ಕೂಡಲೇ ಅಭಿಯಾನದಲ್ಲಿ ಮಕ್ಕಳಿಗೆ ಎರಡು ಹನಿ ಪಲ್ಸ್ ಪೊಲೀಯೋ ಲಸಿಕೆ ಹಾಕಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಬಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಆರ್.ಎಂ.ಓ. ಡಾ.ಜಗದೀಶ್, ರೆಡ್ ಕ್ರಾಸ್ ಅಧ್ಯಕ್ಷ ಶಾಂತರಾಮ ಶೆಟ್ಟಿ, ಆರ್. ಸಿ.ಹೆಚ್ ಅಧಿಕಾರಿ ಡಾ. ರಾಜೇಶ್, ನೋಡಲ್ ಅಧಿಕಾರಿ ಡಾ.ಮಮತಾ ಇನ್ನಿತರರು ಹಾಜರಿದ್ದರು .
ಡಿಸೆಂಬರ್ 21 ರಿಂದ 24 ರವರೆಗೆ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 3 ದಿನಗಳ ಕಾಲ ಹಾಗೂ ನಗರ ಪ್ರದೇಶದಲ್ಲಿ 4 ದಿನಗಳ ಕಾಲ ಪಲ್ಸ್ ಪೊಲೀಯೋ ಅಭಿಯಾನ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ
RELATED ARTICLES



