Saturday, May 30, 2026
Google search engine

Homeರಾಜಕೀಯಸಿದ್ದರಾಮಯ್ಯ ನಿರ್ಗಮನದಿಂದ ರಾಜಕೀಯ ಸಮೀಕರಣ ಬದಲಾಗಲಿದೆ: ಯತ್ನಾಳ್

ಸಿದ್ದರಾಮಯ್ಯ ನಿರ್ಗಮನದಿಂದ ರಾಜಕೀಯ ಸಮೀಕರಣ ಬದಲಾಗಲಿದೆ: ಯತ್ನಾಳ್

ವಿಜಯಪುರ : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಹೊಡೆತವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅಭಿಪ್ರಾಯಪಟ್ಟಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಆರೋಪಿಸಿದ‌ ಅವರು, ಇದರಿಂದ ಕುರುಬ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದೆ. ಹಾಲುಮತ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂಬ ಭಾವನೆ ಜನರಲ್ಲಿ ಮೂಡಿದ್ದು, ಇದರ ಪರಿಣಾಮ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಲಾಭವಾಗಬಹುದು ಎಂದು ಹೇಳಿದರು.

ಹಿಂದುಳಿದ ವರ್ಗಗಳ ಪರವಾಗಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ ಇದೀಗ ಆ ವರ್ಗಗಳ ವಿಚಾರದಲ್ಲಿ ಮೌನವಾಗಿದ್ದಾರೆ ಎಂದು ಅವರು ಟೀಕಿಸಿದರು. ಸಿದ್ದರಾಮಯ್ಯ ರಾಜೀನಾಮೆಯಿಂದ ದಲಿತ ಸಮುದಾಯಕ್ಕೂ ಅನ್ಯಾಯವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯದ ಪರ ಹೆಚ್ಚು ಒಲವು ತೋರಿದ್ದರು. ಆದರೂ ಅವರ ರಾಜೀನಾಮೆ ಬಳಿಕ ರಾಜ್ಯದಲ್ಲಿ ಯಾವುದೇ ಮುಸ್ಲಿಂ ನಾಯಕರು ಬಹಿರಂಗ ವಿರೋಧ ವ್ಯಕ್ತಪಡಿಸಿಲ್ಲ ಎಂದು ಯತ್ನಾಳ್ ಹೇಳಿದರು. ಆದರೆ ಸಿದ್ದರಾಮಯ್ಯ ಅವರ ನಿವೃತ್ತಿ ಸಂದರ್ಭದಲ್ಲಿ ಹೆಚ್ಚು ಟೀಕೆ ಮಾಡುವುದಿಲ್ಲ, ಅವರಿಗೆ ಒಳಿತು ಆಗಲಿ ಎಂದು ಆಶಿಸಿದರು.

RELATED ARTICLES
- Advertisment -
Google search engine

Most Popular