Tuesday, May 20, 2025
Google search engine

Homeರಾಜ್ಯಮೋದಿ ಸರ್ಕಾರದಿಂದ ರಾಜಕೀಯ, ವೈಯಕ್ತಿಕ ಸೇಡು ತೀರಿಸಿಕೊಳ್ಳುತ್ತಿದೆ: ಸುರ್ಜೇವಾಲ ಕಿಡಿ

ಮೋದಿ ಸರ್ಕಾರದಿಂದ ರಾಜಕೀಯ, ವೈಯಕ್ತಿಕ ಸೇಡು ತೀರಿಸಿಕೊಳ್ಳುತ್ತಿದೆ: ಸುರ್ಜೇವಾಲ ಕಿಡಿ

ನವದೆಹಲಿ: ಮೋದಿ ಸರ್ಕಾರ ರಾಜಕೀಯ ಮತ್ತು ವೈಯಕ್ತಿಕ ಸೇಡು ತೀರಿಸಿಕೊಳ್ಳುತ್ತಿದೆ. ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿದ್ದಾರೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್ ಮಾಡಿರುವ ಅವರು, ಕಾಂಗ್ರೆಸ್ ನ ಐದು ಖಾತರಿಗಳನ್ನು ರದ್ದುಗೊಳಿಸುವ ಸಲುವಾಗಿ ಬಿಜೆಪಿಯಿಂದ ಕರ್ನಾಟಕದ ಜನರ ಮೇಲೆ ದಾಳಿ ಮಾಡುತ್ತಿದೆ. ಬಡವರು, ಹಿಂದುಳಿದವರು, ಎಸ್‌ಸಿ , ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ವಿರುದ್ಧ ಬಿಜೆಪಿ ಮತ್ತು ಮೋದಿ ಸರ್ಕಾರದಿಂದ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಬೆಂಬಲಕ್ಕೆ ನಿಂತಿದೆ ಎಂದು ತಿಸಿದ್ದಾರೆ.

RELATED ARTICLES
- Advertisment -
Google search engine

Most Popular