Saturday, June 21, 2025
Google search engine

Homeಅಪರಾಧಚಿಕ್ಕಮಗಳೂರಿನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ

ಚಿಕ್ಕಮಗಳೂರಿನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ

ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದನು.
ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೬೭,೬೭ (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಸಹ ಆಗಿದ್ದಾನೆ.

RELATED ARTICLES
- Advertisment -
Google search engine

Most Popular