ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಇಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಭೇಟಿ ಮಾಡಿ ಅವರಿಗೆ ದೂರು ಸಲ್ಲಿಸಿದೆ.
ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದೆ. ಪೆನ್ ಡ್ರೈವ್ ಪ್ರಕರಣ ಹಾಗೂ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಆರೋಪ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲು ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ನಿಯೋಗದಲ್ಲಿ ಶಾಸಕ ಜಿ.ಟಿ.ದೇವೆಗೌಡ, ಮಾಜಿ ಸಚಿವ ಸಾ.ರಾ ಮಹೇಶ್, ಬಂಡೆಪ್ಪ ಕಾಶಂಪೂರ್ ಉಪಸ್ಥಿತರಿದ್ದರು.