Saturday, May 24, 2025
Google search engine

Homeಅಪರಾಧಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ನಾಲ್ಕನೇ ಆರೋಪಿ ಬಂಧನ

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ನಾಲ್ಕನೇ ಆರೋಪಿ ಬಂಧನ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್ ಆನೆಮಹಲ್ ಬಳಿ ಬಂಧಿಸಿದ್ದಾರೆ. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (೪೩) ಬಂಧಿತ ಆರೋಪಿ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್‌ಐಎ ಕಚೇರಿಗೆ ಕರೆದೊಯ್ದಿದ್ದಾರೆ.
ಪ್ರವೀಣ ನೆಟ್ಟಾರು ಕೊಲೆ

೨೦೨೨ರ ಜುಲೈ ೨೬ ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್‌ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.

RELATED ARTICLES
- Advertisment -
Google search engine

Most Popular