ಬೆಂಗಳೂರು : ಬೆಂಗಳೂರಿನಲ್ಲಿ ಒಂದುವರೆ ತಿಂಗಳ ಗರ್ಭಿಣಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಬ್ಬಳ್ಳಿ ಮೂಲದ ಶಿಲ್ಪ ಎನ್ನುವವರು ಆತ್ಮಹತ್ಯೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಶಿಲ್ಪ ಪ್ರವೀಣ್ ಜೊತೆಗೆ ಮದುವೆಯಾಗಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಶಿಲ್ಪ ಪೋಷಕರು ಗಂಭೀರವಾದ ಆರೋಪ ಮಾಡಿದ್ದಾರೆ.
ಪತಿ ಪ್ರವೀಣ್, ಪತ್ತೆ ಶಾಂತ ನಾದಿನಿ ಪ್ರಿಯ ವಿರುದ್ಧ ಶಿಲ್ಪ ಪೋಷಕರು ಆರೋಪಿಸಿದ್ದಾರೆ. ಕಳೆದ ಹಲವು ತಿಂಗಳ ಹಿಂದೆ ಗಲಾಟೆ ಮಾಡಿ ಶಿಲ್ಪ ತವರು ಮನೆಗೆ ಬಂದಿದ್ದರು. ಪತಿ ಮನೆಯವರು ರಾಜಿ ಪಂಚಾಯ್ತಿ ಮಾಡಿ ಮತ್ತೆ ಗಂಡನ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ ಘಟನೆ ಕುರಿತು ಎಸ್.ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.