Wednesday, May 21, 2025
Google search engine

Homeರಾಜ್ಯಸುದ್ದಿಜಾಲಪ್ರಸವ ಪೂರ್ವದಲ್ಲಿಯೇ ಮಗುವಿನ ಲಿಂಗ ಪತ್ತೆ ಹಚ್ಚುವಿಕೆ ಶಿಕ್ಷಾರ್ಹ ಅಪರಾಧ : ಸಿವಿಲ್ ನ್ಯಾಯಾಧೀಶ...

ಪ್ರಸವ ಪೂರ್ವದಲ್ಲಿಯೇ ಮಗುವಿನ ಲಿಂಗ ಪತ್ತೆ ಹಚ್ಚುವಿಕೆ ಶಿಕ್ಷಾರ್ಹ ಅಪರಾಧ : ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ

ಚಾಮರಾಜನಗರ: ಗರ್ಭದಲ್ಲಿರುವ ಮಗುವಿನ ಬೆಳವಣಿಗೆ ಮತ್ತು ನ್ಯೂನ್ಯತೆ ತಿಳಿಯಲು ಅಭಿವೃದ್ಧಿಪಡಿಸಿದ ತಂತ್ರಜ್ಞಾನದ ದುರುಪಯೋಗ ಮಾಡಿಕೊಂಡು ಪ್ರಸವ ಪೂರ್ವದಲ್ಲಿಯೇ ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಹಚ್ಚುವುದು ಕಾನೂನು ರೀತಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಲಾಗಿದ್ದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯಿದೆ ೧೯೯೪ರ ಕುರಿತು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಲಿಂಗ ಪತ್ತೆ ತಂತ್ರಜ್ಞಾನವು ದುರ್ಬಳಕೆಯಾಗುತ್ತಿದ್ದು ಗರ್ಭಾವಸ್ಥೆಯಲ್ಲಿ ಶಿಶು ಹೆಣ್ಣು ಎಂದು ಕಂಡುಬಂದ ತಕ್ಷಣ ಅದನ್ನು ಗರ್ಭದಲ್ಲೇ ಹತ್ಯೆ ಮಾಡುವ ಪ್ರವೃತ್ತಿ ಸರಿಯಲ್ಲ. ಇದರ ಪರಿಣಾಮದಿಂದ ಪುರುಷರು ಮತ್ತು ಮಹಿಳೆಯರ ಅನುಪಾತದಲ್ಲಿ ವ್ಯತ್ಯಾಸಗಳುಂಟಾಗುತ್ತದೆ. ಗರ್ಭದಲ್ಲಿರುವ ಮಗುವಿನ ಬೆಳವಣಿಗೆ ಮತ್ತು ನ್ಯೂನ್ಯತೆ ತಿಳಿಯಲು ಅಭಿವೃದ್ಧಿಪಡಿಸಿದ ತಂತ್ರಜ್ಞಾನದ ದುರುಪಯೋಗ ಮಾಡಿಕೊಂಡು ಪ್ರಸವ ಪೂರ್ವದಲ್ಲಿಯೇ ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಹಚ್ಚುವುದು ಕಾನೂನು ರೀತಿ ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮಾಜ ಹಾಗೂ ಇಲಾಖೆಗಳಿಗೆ ಕೊಂಡಿಯಾಗಿ ತಳ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರಣ ಸಂಬಂಧಿಸಿದ ಮಾಹಿತಿಗಳನ್ನು ಇಲಾಖಾಧಿಕಾರಿಗಳ ಜೊತೆ ಸಂವಹನ ನಡೆಸಿ ಹೀನಕೃತ್ಯಗಳನ್ನು ತಡೆಗಟ್ಟಬಹುದಾಗಿದೆ ಎಂದು ಡಾ. ಅಂಕಪ್ಪ ತಿಳಿಸಿದರು.

ಆರ್‌ಸಿಎಚ್ ಅಧಿಕಾರಿ ಡಾ. ಮಂಜುನಾಥ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜೆ ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಕಾರ್ಯಕ್ರಮಾಧಿಕಾರಿ ದಿನೇಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ಆಶಾ ಕೊ-ಆರ್ಡಿನೇಟರ್ ಪ್ರಸಾದ್, ಮೇಲ್ವಿಚಾರಕರಾದ ಆಶಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular