Saturday, December 13, 2025
Google search engine

Homeರಾಜ್ಯಡಿಸೆಂಬರ್ 16ರಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಡಿಸೆಂಬರ್ 16ರಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿ. 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಡಿ.16ರ ಮಧ್ಯಾಹ್ನ 2.10ಕ್ಕೆ ಮೈಸೂರಿನ ಏರ್​ಪೋರ್ಟ್​ಗೆ ಆಗಮಿಸಲಿರುವ ದ್ರೌಪದಿ ಮುರ್ಮು, ಬಳಿಕ ಹೆಲಿಕಾಪ್ಟರ್​ನಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳುತ್ತಾರೆ. ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಾರೆ.

ಅಂದು ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗುವ ರಾಷ್ಟ್ರಪತಿ, ಡಿ.16ರಂದು ರಾತ್ರಿ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ.17ರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ತಿರುಪತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೆರಳುತ್ತಾರೆ.

RELATED ARTICLES
- Advertisment -
Google search engine

Most Popular