Tuesday, September 2, 2025
Google search engine

Homeಸ್ಥಳೀಯಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸಿಎಂ ಸಿದ್ಧರಾಮಯ್ಯ ಆತ್ಮೀಯ ಸ್ವಾಗತ

ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸಿಎಂ ಸಿದ್ಧರಾಮಯ್ಯ ಆತ್ಮೀಯ ಸ್ವಾಗತ

ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ ಎರಡು ದಿನಗಳ ಪ್ರವಾಸವನ್ನು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೈಗೊಂಡಿದ್ದಾರೆ. ಇಂದು ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

ಈ ಬಳಿಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳಿದಂತ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

RELATED ARTICLES
- Advertisment -
Google search engine

Most Popular