Tuesday, December 9, 2025
Google search engine

Homeರಾಜ್ಯಸುದ್ದಿಜಾಲಡಿ.17 ರಂದು ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು

ಡಿ.17 ರಂದು ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು

ಮಂಡ್ಯ: ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಉದ್ಘಾಟನೆಗೆ ಡಿ.17 ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮಿಸಲಿದ್ದು, ಈ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರೆ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಟ್ಟಣದ ಹೊರ ಭಾಗದ ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್‌ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ತೆರಳುವ ಮಾರ್ಗ, ಮೂಲಭೂತ ಸೌಲಭ್ಯಗಳ ಅಳವಡಿಕೆ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ಪ್ರವಾಸಿ ಮಂದಿರ, ತಾಲೂಕು ಆಸ್ಪತ್ರೆಗೆ ಬೇಟಿ ನೀಡಿ ಆಡಳಿತಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ದಿನದ 24 ಗಂಟೆಗಳಲ್ಲಿಯೂ ಆರೋಗ್ಯ ಸಿಬ್ಬಂದಿಗಳು ಲಭ್ಯವಾಗಿರಬೇಕು. ತುರ್ತು ಚಿಕಿತ್ಸೆಗೆ ಬೇಕಾದ ಆಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಾ. ಸಂಜಯ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಡಿ.17 ರಿಂದ 22 ರವರಗೆ ನಡೆಯಲಿರುವ ಜಯಂತೋತ್ಸವಕ್ಕೆ ರಾಷ್ಟ್ರಪತಿಗಳು, ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಚಿವರು ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕೆ ತಾಲೂಕು ವ್ಯಾಪ್ತಿಯ ಎಲ್ಲಾ ಲಾಡ್ಜ್, ಕಲ್ಯಾಣ ಮಂಟಪಗಳು, ರೆಸಾರ್ಟ್‌, ರೂಮುಗಳನ್ನು ಕಾಯ್ದಿರಿಸುವುದು, ಕಾನೂನು ಸುವ್ಯವಸ್ಥೆಗೆ ತೊಂದರೆ ಬರದಂತೆ ಫ್ಲೆಕ್ಸ್ ಬ್ಯಾನರ್ ಅಳವಡಿಕೆ, ಸೂಕ್ತ ಪೊಲೀಸ್ ಬಂದೋಬಸ್ ವ್ಯವಸ್ಥೆ ಕುರಿತು ಎಚ್ಚರಿಕೆ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿ ಹಾಗೂ ಸುತ್ತೂರು ಜಯಂತಿ ನಡೆಯುವ ವೇದಿಕೆ ಬಳಿ ಪರಿಶೀಲನೆ ನಡೆಸಿ ವೇದಿಕೆ ಅಳತೆ, ಗಣ್ಯರ ಆಗಮನದ ಮುಖ್ಯದ್ವಾರ, ಪಾರ್ಕಿಂಗ್, ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular