Saturday, April 11, 2026
Google search engine

Homeರಾಜ್ಯಸುದ್ದಿಜಾಲಏ.19ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚುನಾವಣೆ

ಏ.19ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚುನಾವಣೆ

ಕೆ.ಆರ್.ನಗರ : ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಏ. 19 ರಂದು ಭಾನುವಾರ ಚುನಾವಣೆ ನಿಗದಿಯಾಗಿದೆ.

ಅಂದು ಬೆಳಗ್ಗೆ 8.30 ರಿಂದ ಸಂಜೆ 4.30ರ ವರೆಗೆ ಪಟ್ಟಣದ ಬಿಆರ್ ಸಿ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗಿದ್ದು ಆನಂತರ ಸಂಜೆ 6.30ರಿಂದ ಮತ ಏಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.

ಏ.12 ರಂದು ಭಾನುವಾರ ಸಂಜೆ 6 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು 13 ರಂದು ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಯಲ್ಲಿದ್ದು ನಾಮ ಪತ್ರ ವಾಪಸ್ಸ್ ಪಡೆಯಲು ಏ.14 ಮಂಗಳವಾರ ಕಡೆಯ ದಿನವಾಗಿದ್ದು ಸಂಜೆ 6 ಗಂಟೆಯ ನಂತರ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ.

ಮೂರು ಪುರುಷ ಮತ್ತು ಎರಡು ಮಹಿಳಾ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 237 ಮಂದಿ ಶಿಕ್ಷಕರು ಮತದಾನದ ಹಕ್ಕು ಹೊಂದಿದ್ದು ಚುನಾವಣೆಗೆ ಸಕಲ ಸಿದ್ದತೆಗಳನ್ನು ಮಾಡಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕ ಜಿ.ಎನ್.ಜಯಕುಮಾರ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular