Tuesday, May 20, 2025
Google search engine

Homeರಾಜ್ಯಸುದ್ದಿಜಾಲಜಿಲ್ಲೆಯಲ್ಲಿ ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ-ನಂದೀಶ್

ಜಿಲ್ಲೆಯಲ್ಲಿ ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ-ನಂದೀಶ್

ಯಳಂದೂರು: ಜಿಲ್ಲೆಯಲ್ಲಿ ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾಮಾನ್ಯರಿಗೂ ಎಲ್ಲಾ ಸವಲತ್ತುಗಳನ್ನು ಕಲ್ಪಿಸಿಕೊಡಲು ಅದ್ಯತೆ ನೀಡಲಾಗುವುದು ಎಂದು ವೀರಶೈವ ಮಹಾಸಭಾದ ನೂತನ ಜಿಲ್ಲಾಧ್ಯಕ್ಷ ಮುಡ್ಲುಪುರ ನಂದೀಶ್ ತಿಳಿಸಿದರು.

ಅವರು ಈಚೆಗೆ ಪಟ್ಟಣದ ಕಾರಾಪುರ ವಿರಕ್ತಮಠದಲ್ಲಿ ತಾಲೂಕು ವೀರಶೈವ ಮಹಾಸಭಾದ ವತಿಯಿಂದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಮ್ಮ ಸಮಾಜದಲ್ಲಿ ಅನೇಕರಿಗೆ ಇನ್ನೂ ಮೂಲ ಸೌಲಭ್ಯಗಳು ಮರೀಚಿಕೆಯಾಗಿದೆ. ಇದನ್ನು ಕಲ್ಪಿಸಿಕೊಡಲು ಆದ್ಯತೆ ನೀಡಲಾಗುವುದು. ಇದರೊಂದಿಗೆ ಸಮಾಜಕ್ಕೆ ರಾಜಕೀಯವಾಗಿ ಇನ್ನಷ್ಟು ಬಲ ತುಂಬುವ ಕೆಲಸವನ್ನು ಮಾಡಲಾಗುವುದು. ಯುವಕರನ್ನು ಸಂಘಟಿಸಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಣೆ ನೀಡಲಾಗುವುದು. ಬಸವಣ್ಣರವರು ಹಾಕಿಕೊಟ್ಟಿರುವ ಕಾಯಕ ತತ್ವದಡಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಉತ್ತೇಜಿಸಲಾಗುವುದು. ಎಲ್ಲಾ ಧಾರ್ಮಿಕ ಮುಖಂಡರ ಮಾರ್ಗದರ್ಶನವನ್ನು ಪಡೆದುಕೊಂಡು ಶೈಕ್ಷಣಿಕ, ಧಾರ್ಮಿಕ, ಆರ್ಥಿಕವಾಗಿ ಸಬಲಗೊಳಿಸುವ ಕೆಲಸವನ್ನು ಮಾಡಲಾಗುವುದು. ನಾನು ೨ ನೇ ಬಾರಿಗೆ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷನಾಗಿ ಆಯ್ಕೆಯಾಗಿದ್ದು ಇದಕ್ಕೆ ಕಾರಣಕರ್ತರಾದ ನಮ್ಮ ಜಿಲ್ಲೆಯ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಇವರು ನನ್ನಲ್ಲಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸಿದೆ ಅವರ ಕಷ್ಟಗಳಿಗೆ ಸದಾ ಕಾಲ ಸ್ಪಂಧಿಸುತ್ತೇನೆ ಎಂದು ಭರವಸೆ ನೀಡಿದರು.

ಕಾರಾಪುರ ವಿರಕ್ತಮಠದ ನಿರಂಜನ ಬಸವರಾಜಸ್ವಾಮಿ ಒಡೆಯರ್ ಮಾತನಾಡಿ, ವೀರಶೈವ ಮಹಾಸಭಾಕ್ಕೆ ತನ್ನದೇ ಐತಿಹ್ಯವಿದೆ. ಬಸವಣ್ಣರವರ ಕಾಯಕ ತತ್ವದಡಿಯಲ್ಲಿ ಈ ಸಂಘಟನೆ ವಿಶ್ವದಾದ್ಯಂತ ಕರ್ತವ್ಯ ನಿರ್ವಹಿಸುತ್ತಿದೆ. ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪದಾಧಿಕಾರಿಗಳನ್ನು ಹೊಂದಿರುವ ಈ ಸಂಘಟನೆಯ ನೂತನ ಅಧ್ಯಕ್ಷ ಮುಡ್ಲುಪುರ ನಂದೀಶ್ ಉತ್ತಮವಾಗಿ ಕರ್ತವ್ಯ ನಿರ್ವಹಿಸಬಲ್ಲ ಸಾಮರ್ಥ್ಯವನ್ನು ಹೊಂದಿರುವ ವ್ಯಕ್ತಿಯಾಗಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕೇಂದ್ರ ಸಮಿತಿ ನಿರ್ದೇಶಕ ಎನ್‌ರಿಚ್ ಮಹದೇವಸ್ವಾಮಿ ಮಾತನಾಡಿ, ವೀರಶೈವ ಲಿಂಗಾಯಿತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ಬಗ್ಗೆ ಈಗಾಗಲೇ ಅನೇಕರು ಪ್ರಯತ್ನ ನಡೆಸುತ್ತಿದ್ದು ಇದಕ್ಕೆ ರಾಜಕೀಯವಾಗಿ ಹೆಚ್ಚು ಒತ್ತಡ ಹೇರುವ ಕೆಲಸವನ್ನು ಮಾಡಬೇಕು ಎಲ್ಲರ ವಿಶ್ವಾಸವನ್ನು ಪಡೆದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.

ಗೌಡಹಳ್ಳಿ ಮಠದ ಮರಿತೋಂಟದಾರ್ಯಸ್ವಾಮಿಜಿ, ಅಗರ ಕಲ್ಲುಮಠದ ಸಿದ್ಧಮಲ್ಲಸ್ವಾಮಿ, ಕೆಸ್ತೂರು ಪಟ್ಟದ ಮಠದ ತೋಂಟದಾರ್ಯಸ್ವಾಮಜಿ ಚಾಮುಲ್ ಅಧ್ಯಕ್ಷ ನಾಗೇಂದ್ರ, ದುಗ್ಗಹಟ್ಟಿ ಪಿ. ವೀರಭದ್ರಪ್ಪ, ಕೇಂದ್ರ ಸಮಿತಿ ನಿರ್ದೇಶಕರಾದ ಎನ್‌ರಿಚ್ ಮಹದೇವಸ್ವಾಮಿ, ರೂಪಾ, ಮರಹಳ್ಳಿ ಮಾದಪ್ಪ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಪುಟ್ಟಸುಬ್ಬಪ್ಪ, ಕೊಡಸೋಗೆ ವಿ.ಎಂ. ಮಹದೇವಪ್ಪ, ಪುಟ್ಟಬಸಪ್ಪ, ವೀರಭದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ರವಿ, ಪ್ರಕಾಶ್, ಮಂಜು, ಅಗರ ಸುಬ್ಬಣ್ಣ, ರೇವಣ್ಣ, ರಮೇಶ್, ಚಂದ್ರಶೇಖರ್, ರವಿಶಂಕರ್, ನಾಗೇಂದ್ರ, ರುದ್ರೇಶ್, ಆನಂದ್, ಮಧು, ಸ್ವಾಮಿ, ವಿಜಯ್, ಮಹದೇವಸ್ವಾಮಿ ಸೇರಿದಂತೆ ಇತರರು ಇದ್ದರು.


RELATED ARTICLES
- Advertisment -
Google search engine

Most Popular