Wednesday, May 21, 2025
Google search engine

Homeಸ್ಥಳೀಯದ್ವಿತೀಯ ಪಿಯುಸಿ ೨ನೇ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ದ್ವಿತೀಯ ಪಿಯುಸಿ ೨ನೇ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆಗಸ್ಟ್, ೨೧ ರಿಂದ ಸೆಪ್ಟೆಂಬರ್, ೦೨ ರವರೆಗೆ ನಡೆಯುವ ದ್ವಿತೀಯ ಪಿಯುಸಿ ೨ನೇ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

RELATED ARTICLES
- Advertisment -
Google search engine

Most Popular