Friday, January 2, 2026
Google search engine

Homeಅಪರಾಧಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್ ಸೆಕ್ಸ್ ದೋಖಾ ಕೇಸ್: ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಎಂದ...

ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್ ಸೆಕ್ಸ್ ದೋಖಾ ಕೇಸ್: ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಎಂದ ಪ್ರತಿಭಾ ಕುಳಾಯಿ

ಕರಾವಳಿಯಲ್ಲಿ ಹಿಂದೂ ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಪುತ್ತೂರಿನ ಲವ್ ಸೆಕ್ಸ್ ದೋಖಾ ಕೇಸಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜನವರಿ 24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಅವರು ಇಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪ್ರೆಸ್‌ಮೀಟ್ ನಲ್ಲಿ ಮಾತನಾಡಿದರು.
ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ. ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದೆ ಅಂದ ಅವರು, ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆಯು ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನ ಅವರ ಜತೆಗಿದೆ ಎಂದರು.
ಇದೇ ವೇಳೆ ಮಾತನಾಡಿದ ನೊಂದ ಯುವತಿ ಪೂಜಾ ಆಚಾರ್ಯ, ನಾನು ತಪ್ಪು ಮಾಡಿದ್ದೇನೆ. ಹೇಗೂ ತಪ್ಪಾಗಿ ಹೋಗಿದೆ. ಈಗ ಮಗುವಿನ ತಂದೆ ಯಾರು ಎಂದು ಯಾರಾದರೂ ಕೇಳಿದರೆ ನಾನು ಏನೆಂದು ಹೇಳಲಿ, ಅದನ್ನು ನೆನೆಸುವಾಗ ಸಾಯುವ ಎಂದಾಗುತ್ತಿದೆ ಎಂದು ಕಣ್ಣೀರಿಟ್ಟರು.
ಇದೇ ವೇಳೆ ಮಾತನಾಡಿದ ನೊಂದ ಯುವತಿಯ ತಾಯಿ ನಮಿತಾ, ನನ್ನ ಮಗಳಿಂದ ತಪ್ಪಾಗಿದೆ, ಆತನೂ ತಪ್ಪು ಮಾಡಿದ್ದಾನೆ. ಇದು ಅವರದೇ ಮಗು ಎಂಬುದು ಡಿಎನ್‌ಎ ಪರೀಕ್ಷೆಯಲ್ಲೂ ಸಾಬೀತಾಗಿದೆ. ನಮಗೆ ನ್ಯಾಯ ಬೇಕು. ಆತ ಮಗಳನ್ನು ಮದುವೆ ಆಗಿ ಒಳ್ಳೆಯದರಲ್ಲಿ ಸಂಸಾರ ನಡೆಸಬೇಕು” ಎಂದರು.

RELATED ARTICLES
- Advertisment -
Google search engine

Most Popular