Wednesday, May 21, 2025
Google search engine

Homeರಾಜ್ಯಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಅವರು, ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ ೧.೫೦ ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. ೧ ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.೫೦ ಸಾವಿರ ಪರಿಹಾರವನ್ನು ನೀಡಬೇಕು. ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular