ಬೆಂಗಳೂರು: ರಾಜ್ಯಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಮತ್ತೆರಡು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ನಗರದಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗುರುವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಎಚ್ಎಎಲ್ನಲ್ಲಿ 26.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇಂದು ಬೆಂಗಳೂರು ಗರಿಷ್ಠ 26 ಡಿಗ್ರಿ ಯಿಂದ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾದರೆ, ಮಂಗಳೂರು 28-24, ಶಿವಮೊಗ್ಗ 26-21, ಬೆಳಗಾವಿ 26-20, ಮೈಸೂರು 28-22, ಮಂಡ್ಯ 28-21, ಮಡಿಕೇರಿ 24-19, ರಾಮನಗರ 26-21, ಹಾಸನ 24-19, ಚಾಮರಾಜನಗರ 29-21, ಚಿಕ್ಕಬಳ್ಳಾಪುರ 26-20, ಕೋಲಾರ 27-21, ತುಮಕೂರು 26-20, ಉಡುಪಿ 28-23, ಕಾರವಾರ 29-24, ಚಿಕ್ಕಮಗಳೂರು 23-18, ದಾವಣಗೆರೆ 26-22, ಹುಬ್ಬಳ್ಳಿ 28-21, ಚಿತ್ರದುರ್ಗ 27-21, ಹಾವೇರಿ 28-22, ಬಳ್ಳಾರಿ 31-23, ಗದಗ 28-21, ಕೊಪ್ಪಳ 21-22, ರಾಯಚೂರು 31-24, ಯಾದಗಿರಿ 29-23, ವಿಜಯಪುರ 30-22, ಬೀದರ್ 27-23, ಕಲಬುರಗಿ 29-23, ಬಾಗಲಕೋಟೆ 31-22 ತಾಪಮಾನ ದಾಖಲಾಗಲಿದೆ.