Monday, June 16, 2025
Google search engine

Homeರಾಜ್ಯಸುದ್ದಿಜಾಲದಕ್ಷಿಣ ಕನ್ನಡದಲ್ಲಿ ಮಳೆ ಅರ್ಭಟ ಮುಂದುವರಿಕೆ: ರಸ್ತೆ ಬಂದ್, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ

ದಕ್ಷಿಣ ಕನ್ನಡದಲ್ಲಿ ಮಳೆ ಅರ್ಭಟ ಮುಂದುವರಿಕೆ: ರಸ್ತೆ ಬಂದ್, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮಳೆಯೊಂದಿಗೆ ಅಲ್ಲಲ್ಲಿ ಅನಾಹುತ ಸಂಭವಿಸಿರುವುದು ವರದಿಯಾಗಿದೆ. ಅಲ್ಲಲ್ಲಿ ಗುಡ್ಡ ಕುಸಿತ, ಆವರಣಗೋಡೆ ಕುಸಿದು ರಸ್ತೆಗಳಿಗೆ ಬಿದ್ದ ಪರಿಣಾಮವಾಗಿ ರಸ್ತೆಗಳು ಬಂದ್ ಆಗಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.
ಮೂರು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ನಿನ್ನೆ ಮಳೆಯಿಂದಾಗಿ ಮಂಗಳೂರು ನಗರದ ಬಹುಭಾಗ ಜಲಾವೃತಗೊಂಡಿತ್ತು.

ಹಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಇಂದು ಕೂಡಾ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.ಪಾಂಡೇಶ್ವರದ ಶಿವನಗರದ ನಾಲ್ಕನೇ ಕ್ರಾಸ್ ಬಳಿಯ ಪ್ರದೇಶ ಮಳೆಯಿಂದ ಜಲಾವೃತಗೊಂಡಿದ್ದು, ಹಲವು ಮನೆಗಳಿಗೆ ನೆರೆ ನೀರು ನುಗ್ಗಿದೆ. ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅವಕಾಶವಿಲ್ಲದಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.

RELATED ARTICLES
- Advertisment -
Google search engine

Most Popular