ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕೆ.ಆರ್.ನಗರ ತಾಲೂಕಿನ ಕಲ್ಯಾಣಪುರದ ರಾಜಶೇಖರ್ ಅವರನ್ನು ನೇಮಿಸಲಾಗಿದೆ.
ಕೆ.ಆರ್.ನಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ಎರಡು ಬಾರಿ ಅಧ್ಯಕ್ಷರಾಗಿ 15 ವರ್ಷಗಳ ಕಾಲ ವಿವಿಧ ಪದಾಧಿಕಾರಿ ಯಾಗಿ ಕೆಲಸ ನಿರ್ವಹಿಸಿ ಪ್ರಸ್ತುತ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿದ್ದು ಚಾಮಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಇವರ ಸಂಘಟನೆಯನ್ನು ಮನಗೊಂಡು ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ರಾಜಶೇಖರ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿದ್ದಾರೆ.

ಇವರ ನೇಮಕವನ್ನು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಾ.ಡಿ.ನಟರಾಜ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಕೊಪ್ಪಲು ಸಿ.ಎನ್.ಸ್ವಾಮಿ ಮತ್ತು ಎಲ್ಲಾ ಪದಾಧಿಕಾರಿಗಳು ಹಾಗು ಶಿಕ್ಷಕರು ಸ್ವಾಗತಿಸಿ ಅಭಿನಂದಿಸಿದ್ದಾರೆ.