Tuesday, May 20, 2025
Google search engine

Homeರಾಜ್ಯಸುದ್ದಿಜಾಲವಕ್ಫ್ ಬೋರ್ಡ್ ವಿವಾದ ಹಿನ್ನೆಲೆ ಇಂದು ಶ್ರೀರಂಗಪಟ್ಟಣದಲ್ಲಿ ರ್‍ಯಾಲಿ

ವಕ್ಫ್ ಬೋರ್ಡ್ ವಿವಾದ ಹಿನ್ನೆಲೆ ಇಂದು ಶ್ರೀರಂಗಪಟ್ಟಣದಲ್ಲಿ ರ್‍ಯಾಲಿ

ಮಂಡ್ಯ : ರೈತರ, ಸರ್ಕಾರಿ ಶಾಲೆಗಳ ಹಾಗೂ ಇತರೆ ಸರ್ಕಾರಿ ಕಚೇರಿಗಳ ಪಹಣಿಗಳಲ್ಲಿ ವಕ್ಫ್ ಬೋರ್ಡ್ ಎಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಂದ್ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಇಂದು ಶ್ರೀರಂಗಪಟ್ಟಣದಲ್ಲಿ ಬೃಹತ್ ರ್‍ಯಾಲಿ ಆಯೋಜನೆ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಈ ಒಂದು ಪ್ರತಿಭಟನಾ ರ‍್ಯಾಲಿ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯ ಎದುರುಗಡೆ ಹಾದುಹೋಗುವ ಹಿನ್ನೆಲೆಯಲ್ಲಿ ಮಸೀದಿ ಸುತ್ತ 100ಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡಲಾಗಿದೆ. ಕುವೆಂಪು ವೃತ್ತದಿಂದ ತಾಲೂಕು ಕಚೇರಿಯ ವರೆಗೆ ಬೃಹತ್ ರ‍್ಯಾಲಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಬಹುತೇಕ ಅಂಗಡಿ ಮುಂಗಟುಗಳು ಸ್ತಬ್ಧವಾಗಿವೆ. ವಕ್ಫ್ ಬೋರ್ಡ್ ವಿರುದ್ಧ ಶ್ರೀರಂಗಪಟ್ಟಣದಲ್ಲಿ ಇಂದು ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಶ್ರೀರಂಗಪಟ್ಟಣದ ಬಂದ್ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ.

ಕೆಲವೇ ಕ್ಷಣಗಳಲ್ಲಿ ಶ್ರೀರಂಗಪಟ್ಟಣದಲ್ಲಿ ಬೃಹತ್ ರ‍್ಯಾಲಿ  ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾಮಿಯಾ ಮಸೀದಿ ಸುತ್ತಮುತ್ತಲೂ ಕೂಡ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇದೆ ಸಂದರ್ಭದಲ್ಲಿ ಜಾಮಿಯಾ ಮಸೀದಿಗೆ ಸಾರ್ವಜನಿಕರ ಪ್ರವೇಶ ಕೂಡ ನಿರ್ಬಂಧಿಸಲಾಗಿದೆ. ಪ್ರತಿಭಟನೆ ವೇಳೆ ಮಸೀದಿಗೆ ಪ್ರವೇಶವಿಲ್ಲ ಎಂದು ಪ್ರವೇಶ ನಿರ್ಬಂಧಿಸಲಾಗಿದೆ. ಜಾಮೀಯಾ ಮಸೀದಿ ಪಕ್ಕದಲಿ ಹಾದು ಹೋಗುವ ರ‍್ಯಾಲಿ ಹಿನ್ನೆಲೆಯಲ್ಲಿ ಮಸೀದಿಯ ಸುತ್ತಲೂ 100ಕ್ಕೂ ಹೆಚ್ಚು ಪೊಲೀಸರನ್ನು ಯೋಜನೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular