ಬೆಂಗಳೂರು : ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ದೂರು ನೀಡಿರುವ ವಿಚಾರವಾಗಿ ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ಆಗಬಾರದು. ಅಧಿಕಾರಿಗಳಿಗೆ ನಾನು ಯಾವುದೇ ಸೂಚನೆಯನ್ನು ಕೊಟ್ಟಿಲ್ಲ. ಪೊಲೀಸ್ ಕಮಿಷನರ್ ಈ ಕುರಿತು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಜಿ. ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯಲ್ಲಿ ಯಾವುದೇ ತಪ್ಪು ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹುದ್ದೆಗಳಿಗೂ ಸಮರ್ಥರು ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಯಾರು ಸಿಎಂ ಆಗಬೇಕು ಎಂದು ನಿರ್ಧಾರ ಮಾಡುವುದೇ ಮಲ್ಲಿಕಾರ್ಜುನ್ ಖರ್ಗೆ. ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದರೆ ತಪ್ಪು ಭಾವಿಸುವ ಅಗತ್ಯ ಇಲ್ಲ ಖರ್ಗೆ ಏನಾದರೂ ಹೇಳಿದಾಗ ತಪ್ಪಾಗಿ ಭಾವಿಸುವ ಅಗತ್ಯವೇ ಇಲ್ಲ. ಎಂದು ಬೆಂಗಳೂರಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ವಿಜಯಪುರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಕಷ್ಟಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದು ನಾನು ಆದರೆ ಮುಖ್ಯಮಂತ್ರಿಯಾದದ್ದು ಎಸ್ಎಂ ಕೃಷ್ಣ ಎಂದು ಬೇಸರ ಹೊರಹಾಕಿದ್ದರು. ಸಿಎಂ ಸ್ಥಾನ ಕೈ ತಪ್ಪಿದ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಜಿ ಪರಮೇಶ್ವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಅಷ್ಟೇ ಅಲ್ಲದೆ ಎಲ್ಲಾ ಹುದ್ದೆಗಳಿಗೂ ಸಮರ್ಥರಿದ್ದಾರೆ ಎಂದು ತಿಳಿಸಿದರು.