Sunday, June 8, 2025
Google search engine

Homeಅಪರಾಧಅತ್ಯಾಚಾರ ಪ್ರಕರಣ :ಮಡೆನೂರು ಮನುಗೆ ಜಾಮೀನು ಮಂಜೂರು

ಅತ್ಯಾಚಾರ ಪ್ರಕರಣ :ಮಡೆನೂರು ಮನುಗೆ ಜಾಮೀನು ಮಂಜೂರು

ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಜೈಲು ಸೇರಿದ್ದ ಕಿರುತೆರೆ ನಟ ಮಡೇನೂರು ಮನುಗೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಡೆನೂರು ಮನುಗೆ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಇಂದು ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದರು.
ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಅವರು ಬಂಧಿತರಾಗಿದ್ದರು.

RELATED ARTICLES
- Advertisment -
Google search engine

Most Popular