Saturday, January 10, 2026
Google search engine

Homeಅಪರಾಧಯುವತಿಯ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಯುವತಿಯ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ಯುವತಿಯೋರ್ವಳ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ್ ಎಂಬಾತನನ್ನು ಬಂಧಿಸಿರುವುದಾಗಿ ಎಸ್.ಪಿ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ ೨೧ರ ವಯಸ್ಸಿನ ಯುವತಿ ವಾಸವಾಗಿದ್ದು, ಶುಕ್ರವಾರ ಕಾರಿನಲ್ಲಿ ಕರೆದುಕೊಂಡು ಹೋಗಿ, ಬಿಯರ್ಗೆ ಅಮಲು ಪದಾರ್ಥ ಮಿಶ್ರಣ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಯುವತಿಯ ತಾಯಿ ದೂರು ನೀಡಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿನ್ನೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular