ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಕೇಸಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಇಂತಹ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಿಗೆ ಸಂಬಂಧಿಸಿದಂತೆ ೨,೧೪೪ ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ.
ಹಾಸನದ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್‌ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಪ್ರಜ್ವಲ್ ರೇವಣ್ಣ ಅವರು ಜೈಲುಪಾಲಾಗಿದ್ದಾರೆ.
ಎಸ್‌ಐಟಿಯ ತನಿಖಾಧಿಕಾರಿ ಸುಮರಾಣಿಯವರು ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯಕ್ಕೆ ೨,೧೪೪ ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು ೧೨೩ ಸಾಕ್ಷ್ಯಗಳನ್ನು ಸಂಗ್ರಹಿಸಿದಂತ ವರದಿಯಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಲ್ಲಿ ಸಲ್ಲಿಸಿದಂತ ಮೊದಲ ಚಾರ್ಜ್ ಶೀಟ್ ಆಗಿದೆ.