ನೆಲಮಂಗಲ: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹರೀಶ್ (35) ಅತ್ಯಾಚಾರವೆಸಗಿದ ಆರೋಪಿ.
ಬಾಲಕಿಯನ್ನು ಸದ್ಯ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಪೋಷಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬ ಒಂದು ತಿಂಗಳನಿಂದ ಆರೋಪಿ ಹರೀಶ್ ಮನೆಯಲ್ಲಿ ಬಾಡಿಗೆಗೆ ವಾಸವಾಗಿದೆ. ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದ್ದಾಗ ಆರೋಪಿ ಹರೀಶ್ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನ ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.