Tuesday, May 20, 2025
Google search engine

Homeಅಪರಾಧಮಂಗಳೂರು ಸಿಸಿಬಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ ಗಳನ್ನು ಬಂಧಿಸಿದ್ದಾರೆ.

ಹಫೀಝ್ ಯಾನೆ ಅಪ್ಪಿ(35),  ಅಮೀರ್ ಯಾನೆ ಅಮ್ಮಿ(34), ಜಾಕಿರ್ ಹುಸೇನ್ ಯಾನೆ ತಾಚ್ಚಿ (28) ಬಂಧಿತರು.

ಉಳ್ಳಾಲ ತಾಲೂಕಿನ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದರಲ್ಲದೆ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 3 ಮೊಬೈಲ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ಇವುಗಳ ಮೌಲ್ಯ 15,70,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

 ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಹಫೀಝ್ ಯಾನೆ ಅಪ್ಪಿ ಎಂಬಾತನ ವಿರುದ್ಧ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಪಾಂಡೇಶ್ವರ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣಗಳ ಸಹಿತ 8 ಪ್ರಕರಣಗಳು ದಾಖಲಾಗಿವೆ.

ಈತ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದರೂ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೋರ್ವ ಆರೋಪಿ ಜಾಕಿರ್ ಹುಸೇನ್ ಯಾನೆ ತಾಚ್ಚಿ ವಿರುದ್ಧ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಕದ್ರಿ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.

RELATED ARTICLES
- Advertisment -
Google search engine

Most Popular