Monday, April 27, 2026
Google search engine

Homeರಾಜ್ಯಶಾಲೆಗಳಲ್ಲಿ ನ್ಯೂಸ್​ ಪೇಪರ್​ ಓದುವುದು ಕಡ್ಡಾಯ..!

ಶಾಲೆಗಳಲ್ಲಿ ನ್ಯೂಸ್​ ಪೇಪರ್​ ಓದುವುದು ಕಡ್ಡಾಯ..!

ಬೆಂಗಳೂರು: ಮಕ್ಕಳ ಡಿಜಿಟಲ್​ ಬಳಕೆಯನ್ನ ತಡೆಯಲು ಹಾಗೂ ಅವರು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದ್ದು, ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನೂ ಹೊರಡಿಸಿದೆ.

ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೂ ಅನ್ವಯವಾಗುತ್ತದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡು ಆದೇಶ ಹೊರಡಿಸಿದೆ. 

ಈಗಾಗಲೇ ಹಲವು ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ನ್ಯೂಸ್ ಪೇಪರ್ ಓದಿಸುವ ಅಭ್ಯಾಸವಿತ್ತು. ಆದರೆ, ಇನ್ನು ಮುಂದೆ ಪ್ರಾರ್ಥನೆಯ ನಂತರದ 10-15 ನಿಮಿಷಗಳನ್ನು ಪ್ರತ್ಯೇಕವಾಗಿ ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.

RELATED ARTICLES
- Advertisment -
Google search engine

Most Popular