Wednesday, May 28, 2025
Google search engine

Homeರಾಜ್ಯಸುದ್ದಿಜಾಲದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮೇ 27 ಮತ್ತು 28ರಂದು ರಜೆ

ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮೇ 27 ಮತ್ತು 28ರಂದು ರಜೆ

ಮಂಗಳೂರು (ದಕ್ಷಿಣ ಕನ್ನಡ): ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

RELATED ARTICLES
- Advertisment -
Google search engine

Most Popular