ಕ್ರಿಕೆಟ್ ತೀರ್ಪುಗಾರನ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯಲ್ಲಿ ನಿನ್ನೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ
‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ತೀರ್ಪುಗಾರನ ಮೇಲೆ ಹಲ್ಲೆ ನಡೆದಿದೆ. ಮಂಗಳೂರಿನ ಕಾನಾ-ಕೆಜಿಎಫ್ ನಡುವೆ ನಡೆಯುತ್ತಿದ್ದ ಸೆಮಿಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ರೋಲನ್ ಪಿಂಟೋ ಎಂಬ ತೀರ್ಪುಗಾರನ ಮೇಲೆ ಹಲ್ಲೆ ನಡೆದಿದೆ. ಪಂದ್ಯಾಟದ ವೇಳೆ ಎಲ್‍ಬಿಡಬ್ಲ್ಯು ತೀರ್ಪನ್ನ ರೋಲನ್ ಪಿಂಟೋ ಸರಿಯಾಗಿ ನೀಡಿದ್ದರು. ಈ ನಡುವೆ ಪಂದ್ಯಾಟ ಕೈತಪ್ಪುವ ವೇಳೆ ಹೊರಗಿನಿಂದ ಬಂದ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸೆಮಿಫೈನಲ್ ಪಂದ್ಯಾಟದ ವೇಳೆ ಬೆಟ್ಟಿಂಗ್ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ತೀರ್ಪನ್ನ ಪ್ರಶ್ನಿಸಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ. ಕೆಲ ಯುವಕರ ಬೆಟ್ಟಿಂಗ್ ಎಡವಟ್ಟಿನಿಂದ ತೀರ್ಪುಗಾರನ ಮೇಲೆ ಹಲ್ಲೆ ನಡೆದಿದೆ ಎಂದು ಶಂಕಿಸಲಾಗಿದೆ.
ಸದ್ಯ ಕರಾವಳಿಯಲ್ಲಿ ಅತೀ ಹೆಚ್ಚಾಗಿ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದು ನಿನ್ನೆ ದ.ಕ. ಜಿಲ್ಲೆಯ ಎರಡು ಪ್ರತಿಷ್ಠಿತ ಕ್ರಿಕೆಟ್ ತಂಡಗಳ ನಡುವೆ ಆಟ ನಡೆಯುತ್ತಿರುವ ವೇಳೆ ಈ ಘಟನೆ ನಡೆದಿದೆ.
ಕ್ರಿಕೆಟ್ ಪಂದ್ಯಾಟದ ವೇಳೆ ತೀರ್ಪುಗಾರನ ಮೇಲೆ ಹಲ್ಲೆ
RELATED ARTICLES



