ಮೈಸೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ರವರ ಆದೇಶದ ಮೇರೆಗೆ ರೆಹಾನ್ ಬೇಗ್ ಡಿ.ರವರನ್ನು ಮೈಸೂರು ನಗರ ಕಾಂಗ್ರೆಸ್ ಸಮಿತಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ನೇಮಕಾತಿ ಪತ್ರವನ್ನು ಮೈಸೂರಿನ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಮೂರ್ತಿರವರು ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಮೊಹಮ್ಮದ್ ಶಿಫ್ಟನ್ ಹಾಗೂ ಕೆಪಿಸಿಸಿ ಸಂಯೋಜಕರಾದ ಶೌಕತ್ ಅಲಿ ಖಾನ್ ಮತ್ತು ಎನ್ ಆರ್ ಕ್ಷೇತ್ರದ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್ ಹಾಗೂ ದೀಪಕ್ ಕುಮಾರ್ ಇನ್ನು ಮುಂತಾದವರು ಕಾರ್ಯಕರ್ತರು ಇದ್ದರು.