ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪ್ರಕರಣದಿಂದ ಕೈಬಿಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ 57 ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ನಟ ದರ್ಶನ್ & ಗ್ಯಾಂಗ್ ಗೆ ಮತ್ತೊಂದು ಹೊಸ ಸಂಕಷ್ಟ ಶುರುವಾಗಿದೆ. ದರ್ಶನ ಮತ್ತು ಗ್ಯಾಂಗ್ ವಿರುದ್ಧ ಇಂದು ದೋಷರೋಪ ಸಲ್ಲಿಸಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಕೋರ್ಟ್ ದೋಷಾರೋಪ ಹೊರಿಸಲಿದೆ. ದೋಷಾರೋಪದ ಬಳಿಕ ಸಾಕ್ಷಿ ವಿಚಾರಣೆಗೆ ಕೋರ್ಟ್ ದಿನಾಂಕ ನಿಗದಿ ಮಾಡಲಿದೆ. ಹಾಗಾಗಿ ದರ್ಶನ್ ಮತ್ತು ಆರೋಪಿಗಳು ಕೋರ್ಟಿಗೆ ಹಾಜರಾಗಬೇಕಿದ್ದು, ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇಂದು ದೋಷಾರೋಪ ಹೊರಿಸಲಿದೆ.
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ.