Tuesday, November 4, 2025
Google search engine

Homeಅಪರಾಧಕಾನೂನುರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪವಿತ್ರಾಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪವಿತ್ರಾಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ಪವಿತ್ರಾಗೌಡ ಇದೀಗ ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಪವಿತ್ರಾಗೌಡ ಸುಪ್ರೀಂ ಕೋರ್ಟ್‌ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್‌ ನ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕೋರಿ ಪವಿತ್ರಾಗೌಡ ಅರ್ಜಿ ಸಲ್ಲಿಸಿದ್ದಾರೆ .

ನಿನ್ನೆ ಸೆಷನ್ಸ್​​ ಕೋರ್ಟ್ ​​ನಲ್ಲಿ ದೋಷಾರೋಪ ಕೇಳಿದ ನಂತರ ಇದೀಗ ಜಾಮೀನು ಮಂಜೂರು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ನವೆಂಬರ್ 6 ಗುರವಾರ ವಿಚಾರಣೆ  ನಡೆಯಲಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು, ಇದರ ಪರಿಣಾಮವಾಗಿ ಪವಿತ್ರಾ ಗೌಡ ಪುನಃ ಜೈಲು ಸೇರಿದ್ದಾರೆ.

RELATED ARTICLES
- Advertisment -
Google search engine

Most Popular