Tuesday, May 20, 2025
Google search engine

Homeರಾಜ್ಯಸುದ್ದಿಜಾಲಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ, ಏಪ್ರಿಲ್ 22ರಿಂದ 24ರವರೆಗೆ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಲೆ ಮಹದೇಶ್ವರ ಪ್ರಾಧಿಕಾರ ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು, ಭಕ್ತರಲ್ಲಿ ಗೊಂದಲ ಉಂಟಾಗದಂತೆ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಸಭೆಗಾಗಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿರುವುದರಿಂದ, ಸ್ಥಳದಲ್ಲಿ ವಾಸ್ತವ್ಯ ಮಾಡುವ ಭಕ್ತರಿಗೆ ತಾತ್ಕಾಲಿಕವಾಗಿ ಅವಕಾಶ ಇಲ್ಲ. ಕಾರ್ಯದರ್ಶಿ ರಘು ಅವರು ಭಕ್ತರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಹಿಂದೆಯೂ ಈ ಬೆಟ್ಟದಲ್ಲಿ ಸಂಪುಟ ಸಭೆ ನಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ರದ್ದುಪಡಿಸಲಾಗುತ್ತಿತ್ತು. ಈ ಬಾರಿ ಏ.24ರಂದು ಸಭೆ ನಿಗದಿಯಾಗಿದ್ದು, ಸಂಬಂಧಿತ ವ್ಯವಸ್ಥೆಗಳು ಈಗಾಗಲೇ ನಡೆಯುತ್ತಿವೆ.

RELATED ARTICLES
- Advertisment -
Google search engine

Most Popular