ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದಿನ ಹೋರಾಟಕ್ಕೆ ನಿವೃತ್ತ ಇಂಜಿನಿಯರ್ ಅಸೋಸಿಯೇಷನ್ ಹಾಗೂ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾನವಸರಪಳಿ ಮಾಡುವ ಮೂಲಕ ಬೆಂ-ಮೈ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 68 ದಿನಗಳಿಂದ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿ ನಿರಂತರ ಧರಣಿಯಲ್ಲಿ ನಿವೃತ್ತ ಐಜಿಪಿ ಚಂದ್ರಶೇಖರ್ ಭಾಗಿಯಾಗಿದ್ದಾರೆ.
ಇದೆ ವೇಳೆ ರೈತರ ಜೊತೆ ಕುಳಿತು ಕಾವೇರಿಗಾಗಿ ಹೋರಾಟ ಮಾಡಿದ ಚಂದ್ರಶೇಖರ್ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಲಾಯಿತು.
ಪ್ರತಿಭಟನಾ ಧರಣಿಯಲ್ಲಿ ರೈತ ನಾಯಕಿ ಸುನಂದಾ ಜಯರಾಂ, ಕನ್ನಡ ಸೇನೆ ಮಂಜುನಾಥ್, ಸೇರಿದಂತೆ ಹಲವರು ಭಾಗಿಯಾಗಿದ್ದರು.