ಬೆಂಗಳೂರು: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು ಶುಕ್ರವಾರ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ೪೨ನೇ -೪೨ನೇ ಎಸಿಎಂಎಂ ನ್ಯಾಯಾಲಯವು ಆದೇಶವನ್ನು ಮೇ ೨೦ಕ್ಕೆ ಕಾಯ್ದಿರಿಸಿದೆ. ಕಳೆದ ಎರಡು ದಿನಗಳಿಂದ ಎಸ್ ಐಟಿ ಹಾಗೂ ರೇವಣ್ಣ ಪರ ವಕೀಲರಿಂದ ವಾದ-ಪ್ರತಿವಾದ ಆಲಿಸಿದ್ದು, ಇದೀಗ ಅಂತಿಮವಾಗಿ ಕೋರ್ಟ್ ರೇವಣ್ಣ ಅವರ ಜಾಮೀನು ಆದೇಶವನ್ನು ಮೇ ೨೦ಕ್ಕೆ ಕಾಯ್ದಿರಿಸಿದೆ. ಇದರೊಂದಿಗೆ ಇದರೊಂದಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.
ಮೇ ೨೦ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ್ದರಿಂದ ಎಚ್.ಡಿ ರೇವಣ್ಣ ಅವರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಬೇಲ್ ಸಿಗುತ್ತೋ ಇಲ್ವೋ ಎನ್ನುವ ಟೆನ್ಷನ್‌ನಲ್ಲಿ ಮನೆಯತ್ತ ಹೆಜ್ಜೆ ಹಾಕಿದರು. ನಿನ್ನೆ(ಮೇ ೧೬) ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್, ಒಂದು ದಿನ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಅದನ್ನು ಸೋಮವಾರದ ವರೆಗೆ ವಿಸ್ತರಿಸಿದೆ.