Friday, March 6, 2026
Google search engine

Homeರಾಜ್ಯಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು:  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular