Friday, September 19, 2025
Google search engine

Homeಸ್ಥಳೀಯಸುರಕ್ಷಿತ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಪೊಲೀಸ್ ಇಲಾಖೆ ಸಕಲ ಸಿದ್ಧತೆ: ಸೀಮಾ ಲಾಟ್ಕರ್

ಸುರಕ್ಷಿತ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಪೊಲೀಸ್ ಇಲಾಖೆ ಸಕಲ ಸಿದ್ಧತೆ: ಸೀಮಾ ಲಾಟ್ಕರ್

ಮೈಸೂರು: ಸುರಕ್ಷಿತ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಗೆ ಮೈಸೂರು ನಗರ ಪೊಲೀಸರರಿಂದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ತಿಳಿಸಿದರು.

ನಗರದಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಾಡಹಬ್ಬ ಮೈಸೂರು ದಸರಾ-2025ರ ಮಹೋತ್ಸವವು ಸೆಪ್ಟಂಬರ್ 22 ರಿಂದ ಅಕ್ಟೋಬರ್ 02 ರವರಗೆ ಜರಗುಲಿದೆ ಎಂದರು. ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಈ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಅವಶ್ಯಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು,ಸೆಪ್ಟಂಬರ್ 22 ರಿಂದ ಸೆಪ್ಟಂಬರ್ 29 ರವರೆಗೆ 1ನೇ ಹಂತ ಹಾಗೂ ಸೆಪ್ಟಂಬರ್ 30 ರಿಂದ ಅಕ್ಟೋಬರ್ 02ರವರಗೆ 2ನೇ ಹಂತದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ, ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ದಸರಾ ವಸ್ತುಪ್ರದರ್ಶನ, ಕುಸ್ತಿ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ ದೀಪಾಲಂಕಾರ, ಯುವ ದಸರಾ, ಏರ್ ಶೋ, ಜಂಬೂಸವಾರಿ ಮೆರವಣಿಗೆ, ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಹಾಗೂ ನಗರದ ವಿವಿಧ ಸ್ಥಳಗಳಲ್ಲಿ ನಡೆಯುವ ಇತರೆ ಕಾರ್ಯಕ್ರಮಗಳ ಬಂದೋಬಸ್ತ್ ಹಾಗೂ ಸುಗಮ ಸಂಚಾರ ವ್ಯವಸ್ಥೆ ಸೇರಿದಂತೆ ಮೈಸೂರು ನಗರ ಸೇರಿದಂತೆ ಹೊರ ಜಿಲ್ಲೆಗಳಿಂದ 6184 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 5 ಜನ ಎಸ್ಪಿ, 30 ಡಿವೈಎಸ್ಪಿ, 40 ಇನ್ಸ್ಪೆಕ್ಟರ್, 35 ಕೆಎಸ್ಆರ್ಪಿ ತುಕಡಿ, 15 ಸಿಆರ್ ತುಕಡಿ, 29 ಎಎಸ್ಸಿ ತಂಡ, 1 ಆರ್.ಎ.ಎಪ್ ಹಾಗೂ 1700 ಹೋಮ್ ಗಾರ್ಡ್ ಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳಗಳು ಸೇರಿದಂತೆ ಜಂಬೂ ಸವಾರಿ ದಿನ ಅರಮನೆ ಆವರಣ, ಅರಮನೆ ಗೇಟ್‌ಗಳು, ಜಂಬೂ ಸವಾರಿ ಮಾರ್ಗದ ಪ್ರಮುಖ ಸ್ಥಳಗಳು, ಬನ್ನಿ ಮಂಟಪದ ಮೈದಾನದ ಆವರಣ ಮತ್ತು ಹೊರಭಾಗದ ಗೇಟ್‌ಗಳು ಹಾಗೂ ಇತರೇ ಪ್ರಮುಖ ಸ್ಥಳಗಳಲ್ಲಿ 26 ಆಂಬುಲೆನ್ಸ್ ಮತ್ತು 32 ಅಗ್ನಿ ಶಾಮಕ ದಳಗಳನ್ನು ನಿಯೋಜಿಸಲಾಗಿದೆ ಎಂದರು.

ವಾಚ್ ಟವರ್ / ಸಾರ್ವಜನಿಕ ವಿಳಾಸ ವ್ಯವಸ್ಥೆ: ದಸರಾ ಮಹೋತ್ಸವದ ಸಮಯದಲ್ಲಿ ಸಂಚಾರ ನಿಯಂತ್ರಣ ಸಂಚಾರ ವಿಭಾಗದಿಂದ ಸೆ.22 ರಿಂದ ಅಕ್ಟೋಬರ್ 01 ರವರಗೆ ನಗರದ ಎಲ್ಲಾ ಪ್ರಮುಖ ಜಂಕ್ಷನ್ಗಳು ಹಾಗೂ ಪ್ರವಾಸಿ ಸ್ಥಳಗಳಲ್ಲಿ 43 ಸಂಚಾರ ಮಾಹಿತಿ ವಾಚ್ ಟವರ್ ವ್ಯವಸ್ಥೆಯೊಂದಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಅಕ್ಟೋಬರ್ 02 ರಂದು ಜಂಬೂ ಸವಾರಿ ದಿನ ಜನಸಂದಣಿ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಲು ಅರಮನೆಯ ಎಲ್ಲಾ ದ್ವಾರಗಳು, ಜಂಬೂ ಸವಾರಿ ಮಾರ್ಗದಲ್ಲಿ ಕೆ.ಆರ್.ವೃತ್ತ, ಆರ್ಯುವೇದಿಕ್ ವೃತ್ತ, ಆರ್.ಎಂ.ಸಿ ಸರ್ಕಲ್, ಹೈವೇ ಸರ್ಕಲ್, ಬನ್ನಿಮಂಟಪ ಮೈದಾನದ ಎಲ್ಲಾ ದ್ವಾರಗಳು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ 33 ಸಾರ್ವಜನಿಕ ಮಾಹಿತಿ ಕೇಂದ್ರ ತೆರದು ಸಿವಿಲ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಪ್ರವಾಸಿಗರ ಸಹಾಯಕ್ಕಾಗಿ ಪೊಲೀಸ್ ಸಹಾಯ ಕೇಂದ್ರಗಳ ಸ್ಥಾಪನೆ: ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ದಸರಾ ಮತ್ತು ಪ್ರವಾಸಿ ಮಾಹಿತಿ ನೀಡಲು ಹಾಗೂ ಅಗತ್ಯವಿರುವವರಿಗೆ ಪೊಲೀಸ್ ಸಹಾಯ ನೀಡಲು 2 ಹಂತಗಳಲ್ಲಿ “ಪೊಲೀಸ್ ಸಹಾಯ ಕೇಂದ್ರ” (Police Help Desk) ಗಳನ್ನು ಈ ಕೆಳಕಂಡಂತೆ ನಗರದ ಪ್ರಮುಖ ಸ್ಥಳಗಳಲ್ಲಿ ತೆರೆಯಲಾಗಿದೆ ಎಂದು ಹೇಳಿದರು.

ಸಹಾಯ ಕೇಂದ್ರಕ್ಕೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ದಸರಾ ಮಹೋತ್ಸವದ ಕಾರ್ಯಕ್ರಮಗಳ ಬಗ್ಗೆ, ಏಕಮುಖ ಸಂಚಾರ ವ್ಯವಸ್ಥೆ ಬಗ್ಗೆ, ವಾಹನ ನಿಲುಗಡೆ ವ್ಯವಸ್ಥೆ ಬಗ್ಗೆ ಮಾಹಿತಿ ನೀಡುತ್ತಾರೆ. ಸಾರ್ವಜನಿಕರಿಂದ ಗುರುತರವಾದ ದೂರುಗಳು ಬಂದಲ್ಲಿ ಅವರಿಗೆ ಸಂಬಂಧಪಟ್ಟ ಠಾಣೆಗೆ ಹೋಗಿ ದೂರು ಸಲ್ಲಿಸುವಂತೆ ಮಾರ್ಗದರ್ಶನ ನೀಡುತ್ತಾರೆ. ಅಲ್ಲದೇ ಪ್ರವಾಸಿಗರಿಗಾಗಿ ಪೊಲೀಸ್ ಇಲಾಖೆಯಿಂದ ಮುದ್ರಿಸಿರುವ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮುದ್ರಿತವಾಗಿರುವೆ. ಬ್ರೌಷರ್‌ಗಳನ್ನು ವಿತರಣೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಸಹ ಮಾಡಲಿದ್ದಾರೆ ಎಂದರು.

ಸಾರ್ವಜನಿಕರು ತಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿವುಳ್ಳ ಕಿರು ಹೊತ್ತಿಗೆಯನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಯಶಸ್ವಿ ದಸರಾ ಆಚರಣೆಗಾಗಿ ಪೊಲೀಸರು ಹೇಗೆ ಕರ್ತವ್ಯ ನಿರ್ವಹಿಸಬೇಕು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂಐತ್ಯಾದಿ ಮಾಹಿತಿವುಳ್ಳ ಕಿರು ಹೊತ್ತಿಗೆ ವಿತರಣೆ ಮಾಡಲಾಗುವುದು ಎಂದರು.

ಸಂಚಾರ ಮಾರ್ಗ ನಿರ್ಭಂಧ, ಬದಲಿ ಮಾರ್ಗ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆ: ದಸರಾ ಮಹೋತ್ಸವ 2025 ರ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 02 ರವರಗೆ
ಮೈಸೂರು ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಅಧಿಸೂಚನೆಗಳನ್ನು ಹೊರಡಿಸಲಾಗಿದೆ ಎಂದರು.

ಅರಮನೆ ಸುತ್ತಮುತ್ತ ರಸ್ತೆಗಳು ಹಾಗೂ ಇತರೇ ಪ್ರಮುಖ ರಸ್ತೆಗಳಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಸದರಿ ರಸ್ತೆಗಳ ಬದಿಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ. ಗ್ರಾಮಾಂತರ ಬಸ್‌ಗಳು. ನಗರ ಸಾರಿಗೆ ಬಸ್ ಗಳು, ಖಾಸಗಿ ಬಸ್‌ ಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ದಸರಾ ಮಹೋತ್ಸವದ ಸಂಬಂಧ ನಡೆಯುವ ವಿವಿಧ ಕಾರ್ಯಕ್ರಮಗಳ ಸ್ಥಳದ ಬಳಿಯೇ ಸಾಧ್ಯವಾದಷ್ಟು ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 02 ರಂದು ಸಾರಿಗೆ ಬಸ್ಸುಗಳಿಗೆ ನಗರದ ಹೊರ ಭಾಗದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರಾದ ಆರ್.ಎನ್ ಬಿಂದು ಮಣಿ, ಸಂಚಾರ ಮತ್ತು ಅಪರಾಧ ಉಪ ಪೊಲೀಸ್ ಆಯುಕ್ತರಾದ ಕೆ.ಎಸ್.ಸುಂದರ ರಾಜ್ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

RELATED ARTICLES
- Advertisment -
Google search engine

Most Popular